ಜಿಲ್ಲೆಯ ಸಮಸ್ಯೆಗಳಿಗೆ ಮನವಿ ಸಲ್ಲಿಸಲು ಸಿಎಂ ಬಳಿ ನಿಯೋಗ : ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರನ್ನೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಆದೇಶಿಸಿದರು.

ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ‌ ನಡೆದ ಸಭೆಯಲ್ಲಿ ಇಲಾಖಾವಾರು ಜಿಲ್ಲೆಯ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ಪಡೆದುಕೊಂಡರು. ಮಾಹಿತಿ ಕೊರತೆಯಿಂದ ಸಭೆಯಲ್ಲಿ ಉತ್ತರಿಸಲು ಪರದಾಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವಾರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು.

ಕಿಂಡಿ‌ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಸಚಿವರು, ನಗರಾಭಿವೃದ್ಧಿ ಅನುದಾನ‌ದಲ್ಲಿ 15 ದಿನಗಳಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ