ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ಪರಿಹಾರಕ್ಕೆ ಆಗ್ರಹ : ಯಶ್‌ಪಾಲ್ ಸುವರ್ಣ

ಉಡುಪಿ : ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಪಾಡಿ ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿ ಉಪಸ್ಥಿತರಿದ್ದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಹಾನಿಗೀಡಾದ ಮನೆ ಹಾಗೂ ತೋಟ ಹಾಗೂ ಕೃಷಿ ಬೆಳೆ ಹಾನಿಯ ಬಗ್ಗೆ ವರದಿ ನೀಡಿ ಗರಿಷ್ಠ ಪರಿಹಾರಕ್ಕೆ ಶಿಫಾರಸ್ಸು ಮಾಡುವಂತೆ ಸೂಚನೆ ನೀಡಿದರು.

ಸಂಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣಕ್ಕೆ ಈ ಹಿಂದೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ. 5 ಲಕ್ಷ ಪರಿಹಾರವನ್ನು 1.50 ಲಕ್ಷಕ್ಕೆ ಕಡಿತಗೊಳಿಸಿದ್ದು, ಸರ್ಕಾರ ಈ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಹಾಗೂ ತುರ್ತು ಸಂದರ್ಭದಲ್ಲಿ 25 ಸಾವಿರ ಸ್ಥಳದಲ್ಲಿಯೇ ವಿತರಣೆ ಮಾಡುವಂತೆ ಆಗ್ರಹಿಸುವುದಾಗಿ ಹೇಳಿದರು.

ಘಟನೆ ಸಂಭವಿಸಿದ ಕೂಡಲೇ ಶಾಸಕರ ಸೂಚನೆ ಮೇರೆಗೆ ರಾತ್ರೋರಾತ್ರಿ ತಕ್ಷಣ ಪರಿಹಾರ ಕಾರ್ಯಾಚರಣೆಯಲ್ಲಿ ಸಹಕರಿಸಿದ ಕಂದಾಯ, ಅರಣ್ಯ ಅಗ್ನಿಶಾಮಕ, ಮೆಸ್ಕಾಂ, ಪೊಲೀಸ್ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ