ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ : ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ

ಮಂಗಳೂರು : ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು‌ನಲ್ಲಿ ಹೈ-ಕೋರ್ಟ್‌ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಸಭೆಯ ನೇತೃತ್ವನವಹಿಸಿ ವಕೀಲರ ಸಂಘದ ಹಿರಿಯರ ಮಾರ್ಗದರ್ಶನ ಸಾರ್ವಜನಿಕರ ಸಹಕಾರದೊಂದಿಗೆ ತಮ್ಮ ಹೋರಾಟವನ್ನು ತೀವ್ರಗೊಳಿಸುವಗೊಳಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸುವಂತೆ ಸಲಹೆ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲೆ ಇತರ ತಾಲೂಕುಗಳ ವಕೀಲರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ತಮ್ಮ ಪೂರ್ಣ ಪೂರ್ಣ ಬೆಂಬಲವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎಚ್ ವಿ ರಾಘವೇಂದ್ರ, ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮೂಲಭೂತ ಸೌಕರ್ಯ ಇರುವ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆದರೆ ಐದು ಜಿಲ್ಲೆಗಳ ಜನರಿಗೆ ಉಪಯೋಗವಾಗುವುದಾಗಿ ತಿಳಿಸಿದಲ್ಲದೆ, ಈಗಾಗಲೇ ಮಂಗಳೂರು ನಗರದ ಜೈಲಿನ ಪ್ರದೇಶ ಬೇರೆ ಕಡೆಗಳಿಗೆ ಸ್ಥಳಾಂತರಿಸುವುದರಿಂದ ಅಲ್ಲಿ ಸುಮಾರು ಐದರಿಂದ ಆರು ಎಕರೆ ಸ್ಥಳ ಹೈಕೋರ್ಟ್ ಪೀಠ ಸ್ಥಾಪನೆಗೆ ಸೂಕ್ತ ಸ್ಥಳವಾಗಿದ್ದು ಅಲ್ಲದೆ ಮಂಗಳೂರು ನಗರ ಹೈಕೋರ್ಟ್ ಪೀಠ ಸ್ಥಾಪಿಸಲು ಸೂಕ್ತ ಪ್ರದೇಶವಾಗಿದ್ದು, ಮಂಗಳೂರು ನಗರಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೌಲಭ್ಯ, ರಸ್ತೆ ಸಾರಿಗೆ ಸೌಲಭ್ಯ ಅಲ್ಲದೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನಗರವಾಗಿದೆ ಹಾಗೂ ಹೆಚ್ಚಿನ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದೆ ಎಂದು ವಿವರಿಸಲಾಯಿತು.

ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರಿಚಾರ್ಡ್ ಕೊಸ್ತಾ ಎಂ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ ಮಾಜಿ ಉಪಾಧ್ಯಕ್ಷರಾದ ಟಿ ಎನ್ ಪೂಜಾರಿ ಸಭೆಯಲ್ಲಿ ಉಪಸ್ಥಿತರಿದ್ದು ಬೆಂಬಲವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಹಿರಿಯ ವಕೀಲರಾದ ಶ್ರೀ ಎಂ ಪಿ ನರೋನ್ಹ, ಶ್ರೀ ಪೃಥ್ವಿರಾಜ್ ರೈ, ಶ್ರೀ ಅಶೋಕ್ ಅರಿಗ, ಶ್ರೀ ಎಂ ಆರ್ ಬಲ್ಲಾಳ್, ಶ್ರೀ ಮನುರಾಜ್, ಧಿನಕರ್ ಶೆಟ್ಟಿ, ಶ್ರೀಮತಿ ಆಶಾ ನಾಯಕ್, ಶ್ರೀಮತಿ ಸುಮನಾ ಶರಣ್, ಶ್ರೀ ಜಗದೀಶ ಶೇಣವ, ಸಂಘದ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ ಮತ್ತು ಇತರ ಹಿರಿಯ ವಕೀಲರು ಹೋರಾಟದ ರೂಪುರೇಷೆಗಳ ಬಗ್ಗೆ ವಿವರಿಸಿದರು. ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸ ಮನೆ ಸ್ವಾಗತಿಸಿ ಜೊತೆ ಕಾರ್ಯದರ್ಶಿಯಾದ ಶ್ರೀಮತಿ ಜ್ಯೋತಿ ಸುವರ್ಣ ವಂದಿಸಿದರು.

Related posts

ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಬಾರದಂತೆ ಮುನ್ನೆಚ್ಚರಿಕೆ ವಹಿಸಿ : ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ನಿಷೇಧಾಜ್ಞೆ, ಸಂತೆ, ಜಾತ್ರೆ ನಿಷೇಧ ಆದೇಶ ಹಿಂದೆಗೆತ : ಉಡುಪಿ ಜಿಲ್ಲಾಧಿಕಾರಿ

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು – ಜನಾರ್ದನ್ ಕೊಡವೂರು ​