ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಉಡುಪಿ : ಬುದ್ಧಿಮಾಂದ್ಯ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದ ಒಳಗೆ ಎಳೆದೊಯ್ದು ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕುಂಜೆ ಗ್ರಾಮದ ನಿವಾಸಿ ಭಾಸ್ಕರ ಆಚಾರ್ಯ ಅವರನ್ನು ಖುಲಾಸೆಗೊಳಿಸಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸಂತ್ರಸ್ತೆ ನಿರ್ಮಾಣ ಹಂತದ ಕಟ್ಟಡದ ಮರದ ಕೆಲಸಕ್ಕೆ ಬಂದಿದ್ದ ವೇಳೆ ಆರೋಪಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದ. ಸಂತ್ರಸ್ತೆ ಗರ್ಭಿಣಿಯಾಗಿದ್ದರಿಂದ ಮನೆಯವರಿಗೆ ಈ ವಿಷಯ ತಿಳಿದು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲದಲ್ಲಿ ನಡೆಸಿ ಅನಂತರ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಆರೋಪಿ ಪರ ಕುಂದಾಪುರದ ವಕೀಲ ಶ್ಯಾಮಸುಂದರ ನಾೖರಿ ಅವರು ವಾದಿಸಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ