ದೆಂದೂರುಕಟ್ಟೆ – ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಪು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆ‌ಯಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವಕ ಸಂತೋಷ್ ಆಚಾರ್ಯ (39) ಎಂದು ಗುರುತಿಸಲಾಗಿದೆ.

ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣುಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಾಪು ಪೋಲಿಸ್ ಠಾಣೆಯ ಎ.ಎಸ್.ಐ. ಗಣೇಶ್ ಪೈ, ಹಾಗೂ ಶಿವ ನಾಯ್ಕ್ ಮಹಜರು ಪ್ರಕ್ರಿಯೆ ನಡೆಸಿದರು.
ಸ‌ಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತದೇಹವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ತಪಾಸಣಾ ಘಟಕಕ್ಕೆ ರವಾನಿಸಲು ಇಲಾಖೆಗೆ ನೆರವಾದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ