ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ

ಕಟಪಾಡಿ : ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಸೀನಿಯರ್ ಹೆಲ್ತ್ ಆಫೀಸರ್ ಬಸವರಾಜ್, ಮೆಡಿಕಲ್ ಆಫೀಸರ್ ಶೈನಿ, ಪಂಚಾಯತಿ ಅಧ್ಯಕ್ಷರು, ಸದಸ್ಯರು ಇದರಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರು ತೆರೆದ ಪರಿಕರಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ತಾಣವಾಗುತ್ತದೆ‌. ಅದನ್ನು ನಿಯಂತ್ರಿಸಬೇಕು. ಸ್ವಚ್ಚತೆ ಕಾಪಾಡಬೇಕು ಎಂದು ಕಥೆ ನೀಡಿದರು.

ಲಯನ್ಸ್ ಕ್ಲಬ್ ವತಿಯಿಂದ ಕರಪತ್ರಗಳನ್ನು ಮಾಡಿಸಿ ಹಂಚಿ ಜಾಗೃತಿ ಉಂಟು ಮಾಡಲಾಯಿತು. ಅಲ್ಲಿ ಇದ್ದ ವಸ್ತುಗಳಲ್ಲಿ ಲಾರ್ವಾ ಉತ್ಪತ್ತಿಯಾಗಿದೆಯೇ ಎಂದು ತಹಶಿಲ್ದಾರ್ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳ ಮುಂದೆ ಪರಿಶೀಲಿಸಿ ಜಾಗೃತಿ ಉಂಟು ಮಾಡಲಾಯಿತು.

ಸೊಳ್ಳೆ ಕಚ್ಚದ ಹಾಗೆ ನೋಡಿಕೊಳ್ಳಬೇಕು. ಯಾವುದೇ ಜ್ವರಕ್ಕೆ ಸ್ವಯಂ ವೈದ್ಯ ಮಾಡಿಕೊಳ್ಳಬಾರದು. ಡಾಕ್ಟರ್‌ರವರ ಸಲಹೆ ಪಡೆಯಬೇಕು ಎಂದು ತಹಶಿಲ್ದಾರ್ ಪ್ರತಿಭಾ ತಿಳಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ