ಡೆಂಗ್ಯು ಪ್ರಕರಣ ಏರಿಕೆ, ರಕ್ತಕ್ಕೆ ಬೇಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯು ಸೇರಿದಂತೆ, ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದೆ. ಪರಿಣಾಮ ಜಿಲ್ಲೆಯಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಹೆಚ್ಚುಹೆಚ್ಚು ರಕ್ತದಾನ ಶಿಬಿರ ಆಯೋಜಿಸಲು ಮುಂದಾಗಿದೆ. ಅಲ್ಲದೆ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕಡಲ ನಗರಿ ದಕ್ಷಿಣ ಕನ್ನಡ ಜಿಲ್ಲೆಯೂ ಡೆಂಗ್ಯು ಹಾವಳಿಯಿಂದ ಹೊರತಾಗಿಲ್ಲ. ಸದ್ಯ 300ಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಇದು ಆರೋಗ್ಯ ಇಲಾಖೆಯ ನಿದ್ದೆಗೆಡೆಸಿದ್ದು, ಜಿಲ್ಲೆಯಲ್ಲಿ ರಕ್ತದ ಅಗತ್ಯತೆಯೂ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ರಕ್ತ ಸಂಗ್ರಹಕ್ಕೆ ಮುಂದಾಗಿದೆ.

ದ.ಕ.ಜಿಲ್ಲೆಯೂ ಒಳಗೊಂಡಂತೆ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲದೆ, ಕೇರಳ ರಾಜ್ಯದ ರೋಗಿಗಳು ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚಾದಂತೆ ರಕ್ತದ ಅಗತ್ಯತೆಯೂ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ರಕ್ತದ ಬೇಡಿಕೆ ಹೆಚ್ಚಾಗಿದೆ. ರಕ್ತದ ಕೊರತೆ ಸದ್ಯಕ್ಕಿಲ್ಲದಿದ್ದರೂ ನಿರೀಕ್ಷಿದಷ್ಟು ರಕ್ತ ಲಭ್ಯವಿಲ್ಲ. ಡೆಂಗ್ಯು ರೋಗಿಗಳಲ್ಲಿ ಪ್ಲೇಟ್‌ಲೆಟ್‌ ಕುಸಿತ ಪ್ರಮುಖ ಸಮಸ್ಯೆಯಾಗಿದ್ದು, ಆದ್ದರಿಂದ ರಕ್ತದ ಕೊರತೆಯಾಗದಂತೆ ಜಿಲ್ಲಾ ಆರೋಗ್ಯ ಇಲಾಖೆ ರಕ್ತದಾನ ಶಿಬಿರಗಳ ನಡೆಸಲು ಮುಂದಾಗಿದೆ. ಅಲ್ಲದೆ ಸಾರ್ವಜನಿಕರಿಗೆ ರಕ್ತದಾನ ಮಾಡಲು ಆರೋಗ್ಯಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ರಕ್ತದಾನ ಅತ್ಯಂತ ಶ್ರೇಷ್ಠ ದಾನಗಳಲ್ಲಿ ಒಂದು. ಆದ್ದರಿಂದ ಈ ಕ್ಲಿಷ್ಟ ಸಮಯದಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಾಗರಿಕರು ಕೈಜೋಡಿಸುವುದು ಅಗತ್ಯವಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar