ಸರಕಾರಿ ಶಾಲಾ-ಕಾಲೇಜು ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಅವಕಾಶ ನಿರಾಕರಣೆ – ಭಜನೆ ಮಾಡಿ ಬಿಜೆಪಿ ಪ್ರತಿಭಟನೆ

ಮಂಗಳೂರು : ಸರಕಾರಿ ಶಾಲಾ-ಕಾಲೇಜು ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗಳನ್ನು ನಡೆಸದಂತೆ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚ ಮಂಗಳವಾರ ದಕ್ಷಿಣ ಮಂಡಲ ಭಜನೆ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿತು.

ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಭಜನೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಗಣೇಶೋತ್ಸವ, ಮೊಸರುಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಯನ್ನು ಕೋಮುದ್ವೇಷ ಮನಸ್ಥಿತಿಯ ಸಿದ್ದರಾಮಯ್ಯ ಸರಕಾರ ತಡೆಯೊಡ್ಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಗಣೇಶನ ವಿಗ್ರಹವನ್ನು ಇರಿಸಿ ಬೀದಿ ಬದಿಯಲ್ಲಿ ಕುಳಿತು ಬಿಜೆಪಿ ಭಜನೆ ಮಾಡಿ ಆಕ್ರೋಶ ವ್ಯಕ್ತಪಡಿಸಿತು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ