ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು

ಕುಂದಾಪುರ : ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಇಲಾಖೆಯ (ಐಎಫ್‌ಎಸ್‌) ಅಧಿಕಾರಿ ಉದಯ ಜೋಗಿ (59) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಅವರು 10 ದಿನಗಳ ಹಿಂದೆ ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಈ ಅವಘಢ ಸಂಭವಿಸಿದೆ. ಜೋಗಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಬ್ಬರು ಪುತ್ರರು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

ಐಎಫ್‌ಎಸ್‌ ಅಧಿಕಾರಿಯಾಗಿದ್ದ ಅವರು ಅರಣ್ಯ ಇಲಾಖೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದಾರೆ. ಉದಯ ಜೋಗಿ ಅವರ ಮೃತದೇಹವನ್ನು ಸೋಮವಾರ ಹುಟ್ಟೂರಿಗೆ ತರಲಾಗುವುದು ಎಂದು ತಿಳಿದುಬಂದಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ