ಬಿಜೆಪಿಯಿಂದ ಉಚ್ಚಾಟನೆಗೊಂಡರೂ ಪಕ್ಷ ಪ್ರೇಮ ಬಿಡದ ರಘುಪತಿ ಭಟ್!

ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ‌. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆ‌ದಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ. ಬ್ರಜೇಶ್ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ. ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ರಘುಪತಿ ಭಟ್ ಅವರ ಪತ್ನಿ ಕೋಟ ಶ್ರೀನಿವಾಸ ಪೂಜಾರಿ ಅವರ ವಿಜಯದ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ