Friday, April 4, 2025
Banner
Banner
Banner
Home » ದೇವರ ದಾಸಿಮಯ್ಯನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ದೇವರ ದಾಸಿಮಯ್ಯನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

by NewsDesk

ಉಡುಪಿ : ದೇವರ ದಾಸಿಮಯ್ಯನವರು 176ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅದ್ಭುತ ಕೊಡುಗೆಯನ್ನಾಗಿ ನೀಡಿದ್ದಾರೆ. ಅವರು ಬರೆದ ವಚನಗಳಲ್ಲಿ ಭಕ್ತಿಯ ಸ್ವಾರಸ್ಯ ಅಡಗಿದ್ದು, ತಮ್ಮ ವೃತ್ತಿಯನ್ನು ನಿರ್ವಹಿಸುತ್ತಲೇ ಸಮಾಜದ ಬದಲಾವಣೆಗೆ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೇಕಾರ ಸಮುದಾಯವು ತಮ್ಮ ಕುಲಕಸುಬಿನ ಮೂಲಕ ಜೀವನವನ್ನು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಸಹ ದೇಶ ಹಾಗೂ ನಾಡಿನ ಏಳಿಗೆಗಾಗಿ ಶ್ರಮಿಸಬೇಕು ಎಂದ ಅವರು, ದೇವರದಾಸಿಮಯ್ಯನವರು ವಚನ ಸಾಹಿತ್ಯದಲ್ಲಿ ತಮ್ಮ ವಚನಗಳಿಂದಲೇ ಹೊಸ ಛಾಪು ಮೂಡಿಸಿದ್ದಾರೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೇ ಮಹನೀಯರು ಸಮಾಜಕ್ಕೆ ಸಲ್ಲಿಸಿದ ಸೇವೆಗಳನ್ನು ನೆನೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಿ ಜಯಂತಿ ಕಾರ್ಯಕ್ರಮಗಳಿಗೆ ಅರ್ಥಪೂರ್ಣ ಮಹತ್ವ ದೊರೆಯುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಮಾತನಾಡಿ, ದೇವರ ದಾಸಿಮಯ್ಯನವರು ಮಾಡುವ ಕಾಯಕದಲ್ಲಿ ದೇವರನ್ನು ಕಂಡವರು. ಅವರಂತೆಯೇ ಪ್ರತಿಯೊಬ್ಬರು ತಮ್ಮ ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ದೆಯನ್ನು ತೋರುವ ಮೂಲಕ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಶ್ರಾಂತ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಗಿರೀಶ್ ಶೆಟ್ಟಿಗಾರ್ ದಾಸಿಮಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ, ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಸರಳ ರೂಪದಲ್ಲಿ ವಚನ ಸಾಹಿತ್ಯಗಳ ಆಧ್ಯಾತ್ಮಿಕ ಸಾರವನ್ನು ಪ್ರಚಾರ ಪಡಿಸಿದ ದೇವರ ದಾಸಿಮಯ್ಯನವರು, ಅನ್ಯಾಯ, ಅನಾಚಾರ, ವಾಮಮಾರ್ಗಗಳಿಂದ ಗಳಿಸಿರುವುದು ಎಂದಿಗೂ ನಮಗೆ ದಕ್ಕುವುದಿಲ್ಲ ಎಂದು ತಮ್ಮ ವಚನಗಳ ಮೂಲಕ ಸ್ಪಷ್ಠವಾಗಿ ವಿವರಿಸಿದ್ದಾರೆ. ಮಹಾತ್ಮರು ನಡೆದು ಬಂದ ದಾರಿಯನ್ನು ವಿಮರ್ಶೆ ಮಾಡಿಕೊಳ್ಳಲು ಹಾಗೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಮಹನೀಯರ ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಅವರ ವಚನಗಳನ್ನು ಪ್ರತಿಯೊಬ್ಬರೂ ಪಾಲಿಸಿ, ಸುವ್ಯವಸ್ಥಿತ ಸಮಾಜ ನಿರ್ಮಾಣ ಮಾಡುವಲ್ಲಿ ಕೈಜೋಡಿಸಬೇಕು ಎಂದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb