ಧನಂಜಯ ಸರ್ಜಿ, ಭೋಜೇಗೌಡ ಗೆಲುವಿನಿಂದ ಹಿಂದುತ್ವದ ಭದ್ರ ಕೋಟೆ ಎಂದು ಸಾಬೀತು – ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ : ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಪ್ರಚಂಡ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿ ಹಾಗೂ ಎನ್.ಡಿ.ಎ. ಸಮರ್ಥ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯ ಮತಗಳನ್ನು ನೀಡಿ ಗೆಲ್ಲಿಸಿರುವ ಪ್ರಜ್ಞಾವಂತ ಪದವೀಧರ ಮತ್ತು ಶಿಕ್ಷಕ ಮತದಾರರಿಗೆ ಹಾಗೂ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಅವಿರತ ಶ್ರಮ ವಹಿಸಿರುವ ನಿಷ್ಠಾವಂತ ಕಾರ್ಯಕರ್ತರಿಗೆ ತುಂಬು ಹೃದಯದ ಕೃತಜ್ಞತೆಗಳು.

ಉಡುಪಿ, ದ.ಕ. ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಇನ್ನೊಮ್ಮೆ ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎನ್ನುವುದು ಈ ಗೆಲುವಿನಿಂದ ಸಾಬೀತಾಗಿದೆ ಎಂದು ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ