ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ : ಯಶ್‌ಪಾಲ್ ಸುವರ್ಣ ಹರ್ಷ

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ. ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದೊಂದಿಗೆ ಬೆಳೆದು ಬಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಲವು ಗೊಂದಲಗಳ ನಡುವೆಯೂ ಧೃತಿಗೆಡದೆ ಹಗಲಿರುಳು ಶ್ರಮಿಸಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡರನ್ನು ಗೆಲ್ಲಿಸುವ ಮೂಲಕ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನರೇಂದ್ರ ಮೋದಿಯವರಿಗೆ ಗೆಲುವಿನ ಉಡುಗೊರೆ ನೀಡಿದ್ದಾರೆ.

ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಪ್ರಬುದ್ಧ ಮತದಾರರು ಓರ್ವ ಸಜ್ಜನ ವ್ಯಕ್ತಿತ್ವದ ಡಾ. ಧನಂಜಯ ಸರ್ಜಿ ಹಾಗೂ ಕ್ರಿಯಾಶೀಲ ಅಭ್ಯರ್ಥಿ ಭೋಜೇಗೌಡರನ್ನು ತಮ್ಮ ಪ್ರತಿನಿಧಿಯಾಗಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪಕ್ಕೆ ಮುನ್ನುಡಿ ಬರೆದಿದ್ದಾರೆ.

ಪದವೀಧರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಧ್ವನಿಯಾಗಿ ನೂತನ ಶಾಸಕರುಗಳು ಸೇವೆ ನೀಡಲಿದ್ದು, ಗೆಲುವಿಗೆ ಸಹಕರಿಸಿದ ಪ್ರಬುದ್ಧ ಮತದಾರರಿಗೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !