ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಾಡ, ಆಲೂರು, ಹಕ್ಲಾಡಿ ಗ್ರಾಮಸ್ಥರಿಂದ ಉಡುಪಿಯಲ್ಲಿ ಧರಣಿ

ಉಡುಪಿ : ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಧರಣಿ ನಡೆಸಿದರು.

ಧರಣಿಯಲ್ಲಿ‌ ಮಾತನಾಡಿದ ಗ್ರಾಮಸ್ಥರು, ನಾವು ಕೇಳುತ್ತಿರುವ ಮಾರ್ಗದಲ್ಲಿ ಯಾವುದೇ ಬಸ್ಸುಗಳು ಓಡಾಡುತ್ತಿಲ್ಲ. ಇಲ್ಲಿನ ಗ್ರಾಮೀಣ ಪ್ರದೇಶದ ಜನರು ಹಲವಾರು ವರ್ಷಗಳಿಂದ ಬಸ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳು ಶಿಕ್ಷಣಕ್ಕಾಗಿ, ಉದ್ಯೋಗ ಖಾತ್ರಿ ಕೂಲಿಕಾರರು ಪ್ರಯಾಣಕ್ಕೆ ದುಬಾರಿ ವೆಚ್ಚ ನೀಡಿ ಆದಾಯ ಕಳೆದುಕೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿತು ಬಸ್ ಸೌಲಭ್ಯ ನೀಡಬೇಕು. ಇಲ್ಲವಾದಲ್ಲಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ. ನಾಯಕ್ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದರು.

ಕೃಷಿ-ಕೂಲಿಕಾರರ ಸಂಘಟನೆಯ ನಾಗರತ್ನ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ