ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

ಬಂಟ್ವಾಳ : ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

ಉರುಳಿಬಿದ್ದ ವೇಳೆ ಟ್ಯಾಂಕರ್‌ನಲ್ಲಿ ಸಣ್ಣ ರಂಧ್ರ ಉಂಟಾಗಿದ್ದು, ಡಿಸೇಲ್ ಸೋರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕೆಲಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು.

ಘಟನೆಯಿಂದ ಗಂಟೆಗಳಿಗೂ ಅಧಿಕ ಕಾಲ ಸಂಚಾರಕ್ಕೆ ಅಡಚಣೆಯಾಗಿದ್ದು, ಚಾಲಕನಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.

ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್‌ನಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿದ್ದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಇದರಿಂದ ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ, ಕ್ರೇನ್ ಬಳಸಿ ಟ್ಯಾಂಕರ್ ಅನ್ನು ಬದಿಗೆ ಸರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಬಾವಿಗೆ ಬಿದ್ದು ಕೃಷಿಕ ಮೃತ್ಯು

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ