ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಉಡುಪಿ : ಮಹಾನ್ ದಾರ್ಶನಿಕ ದಂತಕಥೆ ರತನ್ ಟಾಟಾ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (AGE)ನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ರಾಜ್ಯಕ್ಕೆ ದ್ವಿತೀಯ ಸ್ಥಾನಗಳಿಸಿದ್ದಾರೆ.

ಹಿಂದೆಯೂ ರಾಷ್ಟ್ರಮಟ್ಟದಲ್ಲಿ ನಡೆದ SPELL BEE ಪರೀಕ್ಷೆಯಲ್ಲಿಯೂ 46ನೇ ರ‍್ಯಾಂಕ್‌ ಗಳಿಸಿ ಮಹತ್ತರ ಸಾಧನೆ ಮೆರೆದದ್ದನ್ನು ಸ್ಮರಿಸಿ ಪ್ರತಿಭಾವಂತ ವಿದ್ಯಾರ್ಥಿಯ ಈ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕರು, PTA ಮತ್ತು ಹಳೆವಿದ್ಯಾರ್ಥಿ ಸಂಘ ಅತೀವ ಸಂತಸ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ