ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿಯಿಂದ ಸರ ಕಳವು – ದೂರು ದಾಖಲು

ಕಾರ್ಕಳ : ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಿಂದ ಸರ ಕಳವು ಮಾಡಿರುವ ಘಟನೆ ಕಾರ್ಕಳ ಮೂರು ಮಾರ್ಗದ ಬಳಿ ಸಂಭವಿಸಿದೆ.

ಮೂರು ಮಾರ್ಗದ ಬಳಿ ಇರುವ ಅಮಿತ್ ಎಂಬವರ ಉಷಾಲಕ್ಷ್ಮಿ ಜ್ಯುವೆಲ್ಲರಿ ಅಂಗಡಿಗೆ ಓರ್ವ ಅಪರಿಚಿತ ವ್ಯಕ್ತಿಯು ಬಂದು ಒಂದು ಚಿನ್ನದ ಕರಿಮಣಿ ಸರವನ್ನು ತೋರಿಸುವಂತೆ ಹೇಳಿದ್ದ. ಅದರಂತೆ ಕೆಲಸದವರು 7.630 ಗ್ರಾಮ್ ತೂಕದ ಚಿನ್ನದ ಕರಿಮಣಿ ಸರವನ್ನು ನೋಡಲು ಕೊಟ್ಟಿದ್ದರು. ಕೆಲಸದವರು ಒಳಗೆ ಹೋಗಿ ವಾಪಾಸು ಬಂದು ನೋಡಿದಾಗ ಆ ವ್ಯಕ್ತಿ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ