ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ

ಉಡುಪಿ : ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಉಚಿತ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇದೊಂದು ಉತ್ತಮ ಕಾರ್ಯಕ್ರಮ. 426 ವಿಕಲಚೇತನರಿಗೆ ಹಾಗೂ 273 ಹಿರಿಯ ನಾಗರಿಕರಿಗೆ ಒಟ್ಟು 64.68 ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆಗಳನ್ನು ಇಂದು ವಿತರಿಸಲಾಯಿತು. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ನೀಡಲಾಗುವ ಅಗತ್ಯ ಸಲಕರಣೆಗಳ ಉತ್ಪಾದನಾ ಕೇಂದ್ರ ಹಾಗೂ ದುರಸ್ತಿ ಕೇಂದ್ರವನ್ನು ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಈ ವರ್ಷ ಉಡುಪಿ ಜಿಲ್ಲೆಯಲ್ಲಿ ಸರ್ವೆ ನಡೆಸಿ 426 ವಿಕಲಚೇತನರಿಗೆ 41.68 ಲಕ್ಷ ರೂ. ಮೌಲ್ಯದ ಹಾಗೂ 273 ಹಿರಿಯ ನಾಗರಿಕರಿಗೆ 23 ಲಕ್ಷ ರೂ. ಮೌಲ್ಯದ ಸಲಕರಣೆಗಳನ್ನು ಇಂದು ವಿತರಿಸಲಾಗುತ್ತಿದೆ. ಈ ಸಲಕರಣೆಗಳನ್ನು ದುರಸ್ತಿ ಪಡಿಸಲು ಮಂಗಳೂರಿನಲ್ಲಿ ದುರಸ್ತಿ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯಲ್ಲೂ ದುರಸ್ತಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು. ಈ ನಿಟ್ಟಿನಲ್ಲಿ ಸಂಸದರು ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ ಮುಖ್ಯ ಅತಿಥಿಗಳಾಗಿ‌ ಭಾಗವಹಿಸಿದ್ದರು.

Related posts

‘ಪಂಪ ಭಾರತ ರೀಟೋಲ್ಡ್ ಇಂಗ್ಲಿಷ್ ನೆರೇಟಿವ್’ ಪುಸ್ತಕ ಅನಾವರಣ – ಪಂಪ ಭಾರತ ಇಂಗ್ಲಿಷ್ ಭಾಷೆಗೆ ಅನುವಾದವಾಗಿರುವುದು ಜಾಗತಿಕ ವಿದ್ಯಾಮಾನ : ಡಾ. ಬಿ.ಎ. ವಿವೇಕ ರೈ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ರಿಂದ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ