ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಾಪು : ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಎಸ್. ಕೋಟ್ಯಾನ್ ಇವರ ವತಿಯಿಂದ “ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ” ಉದ್ಯಾವರದ ಗಣಪತಿ ದೇವಸ್ಥಾನದಲ್ಲಿ ನಡೆಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಕ್ಷೇತ್ರಾಧ್ಯಕ್ಷರಾದ ವಾಸುದೇವ ಸಾಲ್ಯಾನ್, ಉದ್ಯಮಿಗಳಾದ ಹರೀಶ್ ಭಾರದ್ವಾಜ್, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್, ಉದ್ಯಮಿಗಳಾದ ಹರೀಶ್ ಕುಮಾರ್, ಫ್ರೆಂಡ್ಸ್ ಗಾರ್ಡನ್ (ರಿ.) ಆರೂರು ತೋಟ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಉಪಸ್ಥಿತರಿದ್ದರು.

Related posts

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ