ಕಾಪು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಾದ ನಫ್ರಿಶಾತ್ತುಲಾ ಮಿಶ್ರಿಯಾ ಅವರಿಗೆ ಮಂಜೂರಾದ ಮೋಟೋರೈಸ್ಡ್ ಟ್ರೈಸಿಕಲನ್ನು ಇಂದು ಕಾಪು ಶಾಸಕ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಶೇಕಡಾ 75 ಕ್ಕೂ ಅಧಿಕ ಅಂಗವಿಕಲತೆಯನ್ನು ಹೊಂದಿರುವ ಮತ್ತು ಕೈ ಸ್ವಾಧೀನವಿರುವ ಮಾನಸಿಕವಾಗಿ ಸ್ವಸ್ಥರಿರುವವರಿಗೆ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 1 ಫಲಾನುಭವಿಗೆ ಮೋಟೋರೈಸ್ಡ್ ಟ್ರೈಸಿಕಲ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಶಿವಾಜಿ ಉಪಸ್ಥಿತರಿದ್ದರು.