ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ

ಕಾರ್ಕಳ : ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02ರಂದು ವಿಕಾಸ ಕಚೇರಿಯಲ್ಲಿ ನಡೆಯಿತು.

ಶಾಸಕ ವಿ. ಸುನಿಲ್ ಕುಮಾ‌ರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕು ಮತ್ತು ಸ್ವಾವಲಂಬಿಗಳಾಗಿ ದುಡಿಯಬೇಕು ಎನ್ನುವ ನಿಟ್ಟಿನಲ್ಲಿ ಸರಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದೆ. ಅರ್ಜಿ ಸಲ್ಲಿಸಿದ 35 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಗಿದೆ ಎಂದರು.

ಜೊತೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾರ್ಕಳ ತಾಲೂಕು ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಡುಪಿ ನಗರ ಪೊಲೀಸರ ರಾತ್ರಿ ಕಾರ್ಯಾಚರಣೆ – ಅಕ್ರಮ ಚಟುವಟಿಕೆ ನಡೆಸುವವರಿಗೆ ವಾರ್ನಿಂಗ್

ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕಠಿಣ ಕ್ರಮ : ಅಧಿಕಾರಿಗಳಿಗೆ ಉಡುಪಿ ಡಿಸಿ ಕಟ್ಟುನಿಟ್ಟಿನ ಸೂಚನೆ

ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ – ನ್ಯಾಯಮೂರ್ತಿಗಳಿಗೆ ಸನ್ಮಾನ