ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

ಮಂಗಳೂರು : ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.

7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.

ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಉಪಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ – ಡಿಕೆಶಿಯಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ