ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್ ನಾಪತ್ತೆ : ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ನೆರೆ ಹಾವಳಿ, ಕಡಲ್ಕೊರೆತ, ಆಸ್ತಿ-ಪಾಸ್ತಿ ನಷ್ಟ, ಬೆಳೆ ಹಾನಿ ಸಹಿತ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್ ಅವರು ಜಿಲ್ಲೆಯಲ್ಲಿ ಎಲ್ಲಿಯೂ ಕಾಣಲು ಸಿಗದೇ ನಾಪತ್ತೆಯಾಗಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವು ಯಾವಾಗಲೂ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದೀರಾ ಎಂಬುದನ್ನು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ.

ರಾಜ್ಯದ ಮುಖ್ಯಮಂತ್ರಿಗಳು ಕೂಡಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸರಕಾರದ ಆದಾಯ ಹೆಚ್ಚಿಸಲು ಉಡುಪಿಯನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಎಂಬ ಸೂಚನೆ ನೀಡುತ್ತಿದ್ದಾರೆ ವಿನಃ ನೆರೆ ಹಾವಳಿಯಿಂದ ಜಿಲ್ಲೆಯ ಅನೇಕ ಮುಖ್ಯ ರಸ್ತೆಗಳು ಹೊಳೆಯಂತೆ ಮಾರ್ಪಾಡಾಗಿ ಕೃತಕ ಈಜು ಕೊಳ ನಿರ್ಮಾಣವಾಗಿರುವ ಕುರಿತು ದಿವ್ಯ ಮೌನ ವಹಿಸಿರುವುದು ಶೋಚನೀಯವಾಗಿದೆ ಎಂದು ಸಂಧ್ಯಾ ರಮೇಶ್‌ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !