ಕಸಾಪದಿಂದ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯ ರೂವಾರಿ, ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ ಪ್ರದಾನ ಕಾರ್ಯಕ್ರಮ ಅ.19ರಂದು ಸಂಜೆ 4 ಗಂಟೆಗೆ ಕಾಪು ಕಲ್ಯಾದಲ್ಲಿ ಜರಗಲಿದೆ.

ಇದೇ ಸಂದರ್ಭದಲ್ಲಿ ಪಾಂಗಾಳ ಬಾಬು ಕೊರಗ ಅವರ ಸರ್ವಾಧ್ಯಕ್ಷತೆಯಲ್ಲಿ ಪಲಿಮಾರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನ.16ರಂದು ಸಾಮಾಜಿಕ ತಲ್ಲಣಗಳಿಗೆ ಸಾಹಿತ್ಯಕ ಪ್ರತಿಸ್ಪಂದನೆ ಪರಿಕಲ್ಪನೆಯಲ್ಲಿ ಜರಗಲಿರುವ ಕಾಪು ತಾಲ್ಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ‘ನೆಲದುಲಿ’ಯನ್ನು ದೇವದಾಸ್ ಶೆಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಸಾಪ ಕಾಪು ತಾಲ್ಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ