ದ.ಕ ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘ : ವಿ.ಪ. ಸದಸ್ಯ ಮಂಜುನಾಥ ಭಂಡಾರಿ ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಹವಾಲು ಮಂಡಿಸಿ, ಮನವಿ ಸಲ್ಲಿಸಿತು. ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಘದ ನಿಯೋಗ ಮಂಜುನಾಥ ಭಂಡಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಇದೇ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ಬೇಡಿಕೆಗೆ ಶೀಘ್ರದಲ್ಲೇ ಸ್ಪಂದಿಸುವುದಾಗಿ ಭರವಸೆ ನೀಡಿದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ