ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಹೆಬ್ರಿ ಟೌನ್ ಪೊಲೀಸ್ ಠಾಣೆಗೆ ತಮ್ಮ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ಸಮುದಾಯ ಸುರಕ್ಷತೆಯನ್ನು ಸುಧಾರಿಸಲು ಐದು ಸುಧಾರಿತ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಮತ್ತು 2 ಪ್ರಿಂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.

ಡಾ.ಎಚ್.ಎಸ್. ಬಲ್ಲಾಳ್, ಮಾಹೆಯ ಪ್ರೊ-ಚಾನ್ಸೆಲರ್ ಅವರು, “ಈ ಕೊಡುಗೆಯು ಆಧುನಿಕ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಹಾಗೂ ಸ್ಥಳೀಯ ಕಾನೂನು ಜಾರಿಯನ್ನು ಬೆಂಬಲಿಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಈ ಸಂಪನ್ಮೂಲಗಳು ಅಂಕಿ ಅಂಶಗಳ ನಿರ್ವಹಣೆ ಮತ್ತು ಸೈಬರ್-ಸಂಬಂಧಿತ ಕಾರ್ಯಗಳಲ್ಲಿ ಅವರ ಪ್ರಯತ್ನಗಳನ್ನು ಹೆಚ್ಚಿಸುತ್ತವೆ ಎಂದು ನಾವು ಭಾವಿಸುತ್ತೇವೆ.

ಡಾ. ರವಿರಾಜ ಎನ್.ಎಸ್., ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ – ಮಾಹೆ ಅವರು, “ನಮ್ಮ 28,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಕ್ಯಾಂಪಸ್ ಸಮುದಾಯದ ಸುರಕ್ಷತೆಯನ್ನು ಖಾತ್ರಿಪಡಿಸುವುದು, ಅತ್ಯಂತ ಮಹತ್ವದ್ದಾಗಿದೆ. ಈ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಪೊಲೀಸರ ಸಮರ್ಪಣೆಯನ್ನು ನಾವು ಆಳವಾಗಿ ಪ್ರಶಂಸಿಸುತ್ತೇವೆ ಮತ್ತು ಅವರ ಕೆಲಸವನ್ನು ಬೆಂಬಲಿಸಲು ಹೆಮ್ಮೆಪಡುತ್ತೇವೆ.

ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ಶ್ರೀ ಮಹೇಶ್ ಟಿ.ಎಂ. ಕೃತಜ್ಞತೆಯನ್ನು ವ್ಯಕ್ತಪಡಿಸಿ, “ಈ ವ್ಯವಸ್ಥೆಗಳು, ತನಿಖೆಗಳು ಮತ್ತು ಪ್ರಕರಣ ನಿರ್ವಹಣೆಯಲ್ಲಿ ನಮ್ಮ ದಕ್ಷತೆಯನ್ನು ಹೆಚ್ಚು ಸುಧಾರಿಸುತ್ತದೆ. ಮಾಹೆ ಅವರ ಅಮೂಲ್ಯವಾದ ಬೆಂಬಲಕ್ಕಾಗಿ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ.

ಔಪಚಾರಿಕ ಹಸ್ತಾಂತರ ಸಮಾರಂಭದಲ್ಲಿ ಮಾಹೆಯ ಉನ್ನತ ಅಧಿಕಾರಿಗಳಾದ ಡಾ. ನಾರಾಯಣ ಸಭಾಹಿತ್ ಪ್ರೊ ವೈಸ್ ಚಾನ್ಸೆಲರ್ (ತಂತ್ರಜ್ಞಾನ ಮತ್ತು ವಿಜ್ಞಾನ), ಡಾ. ಶರತ್ ರಾವ್, ಪ್ರೊ ವೈಸ್ ಚಾನ್ಸೆಲರ್ (ಆರೋಗ್ಯ ವಿಜ್ಞಾನ), ಡಾ. ಪಿ. ಗಿರಿಧರ್ ಕಿಣಿ, ರಿಜಿಸ್ಟ್ರಾರ್, ಶ್ರೀ ಮುತ್ತಣ್ಣ, ಸಲಹೆಗಾರ ಯೋಜನೆಗಳು, ಶ್ರೀ ಸತೀಶ್ ಕಾಮತ್, ಉಪ ನಿರ್ದೇಶಕರು, ಮಾಹಿತಿ ಮತ್ತು ತಂತ್ರಜ್ಞಾನ ಹಾಗು ಹೆಬ್ರಿ ಟೌನ್ ಪೊಲೀಸ್ ಠಾಣೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಸ್ಥಳೀಯ ಸಮುದಾಯದೊಂದಿಗೆ ತೊಡಗಿಸಿಕೊಳ್ಳಲು ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಿ ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಖಾತ್ರಿಪಡಿಸಲು ತಾಂತ್ರಿಕ ಸಂಪನ್ಮೂಲಗಳನ್ನು ಒದಗಿಸಲು ಮಾಹೆಯು ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿದೆ.

Related posts

ಇಂದ್ರಾಳಿ ರೈಲ್ವೇ ಮೇಲ್ಸೇತುವೆ – ಜನವರಿ 10ರಿಂದ ವಾಹನ ಬಳಕೆಗೆ ಮುಕ್ತಗೊಳಿಸುವಂತೆ ಡಿಸಿ ಸೂಚನೆ

ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್- ಮೂವರು ಅರೆಸ್ಟ್

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ (MCHP), ಮಾಹೆಯ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ರಜತ ಮಹೋತ್ಸವ