ಗುರಿ ಮುಟ್ಟುವ ತನಕ ವಿರಮಿಸದಿರಿ : ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ

ಉಡುಪಿ : ಪಕ್ಷದ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಜಿಲ್ಲೆ. ಸದಸ್ಯತಾ ಅಭಿಯಾನದಲ್ಲಿ ಪಕ್ಷದ ರಾಷ್ಟ್ರ, ರಾಜ್ಯ ನಾಯಕರು ನಿಗದಿಪಡಿಸಿರುವ ಗುರಿ ಮುಟ್ಟುವ ತನಕ ವಿರಮಿಸದಿರಿ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸದಸ್ಯತಾ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸೆ.2ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆಗೊಂಡಿರುವ ಬಿಜೆಪಿ ಸದಸ್ಯತಾ ಅಭಿಯಾನ ದೇಶದಾದ್ಯಂತ ವೇಗ ಪಡೆದಿದೆ. ಪಕ್ಷದ ಕಾರ್ಯಕರ್ತರು ಪ್ರತೀ ದಿನ 2 ತಾಸು ಸಮಯ ನೀಡಿ ಯೋಜನಾ ಬದ್ಧವಾಗಿ ಬೂತ್ ವ್ಯಾಪ್ತಿಯ ಮನೆ ಮನೆ ಭೇಟಿ ನಡೆಸುವ ಜೊತೆಗೆ ಪ್ರಧಾನಿ ಮೋದಿ ಅಭಿಮಾನಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡಾಗ ಗುರಿ ತಲುಪಲು ಸುಲಭ ಸಾಧ್ಯ. ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳ ಸಹಕಾರದೊಂದಿಗೆ ಸಂಘಟಿತ ಪ್ರಯತ್ನದ ಮೂಲಕ ನಿಗದಿತ ಅವಧಿಯಲ್ಲಿ ನಿಶ್ಚಿತ ಗುರಿಯನ್ನು ತಲುಪಬೇಕು ಎಂದು ಅವರು ತಿಳಿಸಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮಾಜಿ ಸಚಿವ ಭಗವಂತ ಖೂಭಾ ಅವರನ್ನು ಶಾಲು ಹೊದೆಸಿ ಸನ್ಮಾನಿಸಿ ಮಾತನಾಡಿ, ಕಳೆದ ಒಂದು ವಾರದಿಂದ ಸದಸ್ಯತಾ ಅಭಿಯಾನ ಜಿಲ್ಲೆಯಾದ್ಯಂತ ವೇಗ ಪಡೆದಿದೆ. ಇನ್ನುಳಿದ ಕೆಲವೇ ದಿನಗಳಲ್ಲಿ ರಾಜ್ಯ ಘಟಕ ನೀಡಿರುವ ಗುರಿಯನ್ನು ತಲುಪಲು ಎಲ್ಲರೂ ಬದ್ಧತೆಯಿಂದ ಶ್ರಮ ವಹಿಸಬೇಕು ಎಂದರು.

ಸೆ.29ರಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮದ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಪ್ರಕ್ರಿಯೆಯಲ್ಲಿ 91% ಪ್ರಗತಿ ಸಾಧಿಸಿದ ಬೈಂದೂರು ಮಂಡಲದ ಪರವಾಗಿ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮನ್ ಕೀ ಬಾತ್ ಮಂಡಲ ಸಂಯೋಜಕಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್.ಕೆ. ಹಾಗೂ ಸದಸ್ಯತಾ ಅಭಿಯಾನದಲ್ಲಿ 2,000ಕ್ಕೂ ಮಿಕ್ಕಿ ಸದಸ್ಯತನ ನೊಂದಾಯಿಸಿದ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್. ಅವರನ್ನು ಭಗವಂತ ಖೂಭಾ ಅವರು ಗೌರವಿಸಿದರು.

ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ದೆ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಕುರಿತು ಮಾರ್ಗದರ್ಶನ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸೇವಾ ಪಾಕ್ಷಿಕ ಅಭಿಯಾನದ ಅ.2ರ ಗಾಂಧಿ ಜಯಂತಿ ಪ್ರಯುಕ್ತ ಪಕ್ಷದ ವತಿಯಿಂದ ನಡೆಯುವ ಸ್ವಚ್ಛತಾ ಕಾರ್ಯಕ್ರಮಗಳ ಮಾಹಿತಿ ನೀಡಿ, ಸೆ.29ರಂದು ನಡೆದ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಕುರಿತು ಮಂಡಲವಾರು ಪ್ರಗತಿಯ ವರದಿ ಮಂಡಿಸಿದರು.

ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ಜಿಲ್ಲಾ ಉಪಾಧ್ಯಕ್ಷರಾದ ಪೆರಣoಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಯರಾಮ್ ಸಾಲ್ಯಾನ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಸದಸ್ಯತಾ ಅಭಿಯಾನದ ಸಂಚಾಲಕರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು