ಹಿಂದೂ ಸಮಾಜವನ್ನು ಕೆಣಕುವ ದುಸ್ಸಾಹಸಕ್ಕೆ ಮುಂದಾಗಬೇಡಿ : ಗಂಟಿಹೊಳೆ ಎಚ್ಚರಿಕೆ

ಬೈಂದೂರು : ಬೈಂದೂರಿನಲ್ಲಿ ಹಿಂದೂ ಯುವತಿಯೋರ್ವಳನ್ನು ಮುಸ್ಲಿಂ ಯುವಕನೊಬ್ಬ ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿದ ಹಿಂದೂ ಯುವಕನ ಮೇಲೆಯೇ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರ ನಡೆಯನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಂದಾಪುರ ಪೊಲೀಸ್ ಠಾಣೆದುರು ದಿಢೀರ್ ಎಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ಕೆಣಕುವ ದುಸ್ಸಾಹಸಕ್ಕೆ ಮುಂದಾಗಿದ್ದು ಇದಕ್ಕೆ ತಕ್ಕ ಬೆಲೆ ತೆರಲಿದೆ. ಪೊಲೀಸರು ಈ ಕೂಡಲೇ ಬಂಧಿಸಿದ ವ್ಯಕ್ತಿಯನ್ನು ಬಿಡುಗಡೆಗೊಳಿಸಿ ಯುವತಿಯನ್ನು ಚುಡಾಯಿಸಿದ ವ್ಯಕ್ತಿಯನ್ನು ಬಂಧಿಸಿ ಆತನ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ