ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರಿನ ವೈದ್ಯಕೀಯ ಅಧೀಕ್ಷಕರಾಗಿ ಡಾ. ಚಕ್ರಪಾಣಿ ಎಂ ನೇಮಕ

ಮಂಗಳೂರು : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರಿನ ನೂತನ ವೈದ್ಯಕೀಯ ಅಧೀಕ್ಷಕರನ್ನಾಗಿ ಡಾ. ಚಕ್ರಪಾಣಿ ಎಂ. ಅವರನ್ನು ಮಾಹೆ ಮಣಿಪಾಲವು ನೇಮಕ ಮಾಡಿದೆ. ದಕ್ಷಿಣ ಕನ್ನಡದ ಅತ್ಯಂತ ಗೌರವಾನ್ವಿತ ಹಿರಿಯ ವೈದ್ಯರಾಗಿರುವ ಇವರು, ಆಸ್ಪತ್ರೆಯ ಕ್ಲಿನಿಕಲ್ ಮತ್ತು ಆಡಳಿತಾತ್ಮಕ ಉತ್ಕೃಷ್ಟತೆಯನ್ನು ಹೆಚ್ಚಿಸುವ ಭರವಸೆ ನೀಡುವ ಪರಿಣತಿ ಮತ್ತು ನಾಯಕತ್ವದ ಅನುಭವ ಹೊಂದಿದ್ದಾರೆ. ಅವರ ಅಸಾಧಾರಣ ಕ್ಲಿನಿಕಲ್ ಕೌಶಲ್ಯಗಳಿಗಾಗಿ ಅವರು ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದಾರೆ ಮತ್ತು ಈ ಪ್ರದೇಶದಲ್ಲಿ ವೈದ್ಯಕೀಯ ಚಿಕಿತ್ಸಾ ಮೂಲಾಧಾರವಾಗಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಅವರ ಕೊಡುಗೆಗಳು ಅವರಿಗೆ ವ್ಯಾಪಕವಾದ ಮನ್ನಣೆ ಮತ್ತು ಗೌರವವನ್ನು ತಂದುಕೊಟ್ಟಿವೆ.

ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಬಿ.ಉನ್ನಿಕೃಷ್ಣನ್ ಅವರು ಡಾ.ಚಕ್ರಪಾಣಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, “ಇವರು ಹಲವಾರು ನಾಯಕತ್ವದ ಸ್ಥಾನಗಳಿಂದ ಗುರುತಿಸಲ್ಪತ್ತಿದ್ದಾರೆ, ಈ ಹಿಂದೆ ವೈದ್ಯಕೀಯ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಅವರ ನಾಯಕತ್ವವು ವಿಭಾಗದ ಮತ್ತು ಅದರಾಚೆಗಿನ ವೈದ್ಯಕೀಯ ಅಭ್ಯಾಸದ ಗುಣಮಟ್ಟವನ್ನು ರೂಪಿಸುವಲ್ಲಿ ಮತ್ತು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೆಎಂಸಿ ಅತ್ತಾವರ ಆಸ್ಪತ್ರೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಾರ್ಗದರ್ಶನವನ್ನು ನಾವು ಕುತೂಹಲದಿಂದ ನಿರೀಕ್ಷಿಸುತ್ತೇವೆ ಮತ್ತು ಅವರ ಪ್ರಯತ್ನಗಳಲ್ಲಿ ಪ್ರತಿ ಯಶಸ್ಸನ್ನು ಬಯಸುತ್ತೇವೆ” ಎಂದಿದ್ದಾರೆ.

ಅಸೋಸಿಯೇಶನ್ ಆಫ್ ಫಿಸಿಶಿಯನ್ಸ್ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಡಾ.ಚಕ್ರಪಾಣಿಯವರು, ವೈದ್ಯಕೀಯ ಕ್ಷೆತ್ರದಲ್ಲಿ ಸಮುದಾಯಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ, ಸಹಯೋಗ ಮತ್ತು ನಿರಂತರ ಸುಧಾರಣೆಯ ಮನೋಭಾವವನ್ನು ಬೆಳೆಸಿದ್ದಾರೆ. ಕ್ರಿಟಿಕಲ್ ಕೇರ್‌ ಮೆಡಿಸಿನ್‌ನ ಪ್ರವರ್ತಕರಾಗಿ, ಅವರು ಇಂಡಿಯನ್ ಸೊಸೈಟಿ ಆಫ್ ಕ್ರಿಟಿಕಲ್ ಕೇರ್ ಮೆಡಿಸಿನ್‌ನ ಮಂಗಳೂರು ಅಧ್ಯಾಯದ ಅಧ್ಯಕ್ಷರಾಗಿ, ಕ್ರಿಟಿಕಲ್ ಕೇರ್ ಸೇವೆಗಳಲ್ಲಿ ಪ್ರಗತಿ ಮತ್ತು ಹೊಸ ಮಾನದಂಡಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಕ್ಲಿನಿಕಲ್ ಮತ್ತು ನಾಯಕತ್ವದ ಜೊತೆಗೆ, ಅವರು ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಆಗಿ ಸೇವೆ ಸಲ್ಲಿಸಿರುತ್ತಾರೆ. ಅವರ ಶೈಕ್ಷಣಿಕ ಕೊಡುಗೆಗಳು, ಮುಂದಿನ ತಲೆಮಾರುಗಳ ವೈದ್ಯಕೀಯ ವೃತ್ತಿಪರರಿಗೆ ಮಾರ್ಗದರ್ಶಕರಾಗಿ, ಮೂರು ಪಿಎಚ್‌ಡಿ ವಿದ್ವಾಂಸರಿಗೆ ಮಾರ್ಗದರ್ಶಕರಾಗಿ ಮತ್ತು 82 ಪ್ರಕಟಣೆಗಳನ್ನು ಪ್ರಕಟಿಸುವುದರ ಮೂಲಕ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಶ್ರೀಮಂತಗೊಳಿಸಿದ್ದಾರೆ.

ವೈದ್ಯಕೀಯ ಅಧೀಕ್ಷಕರಾಗಿ ಅವರ ನೇಮಕವು ಅತ್ತಾವರದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹೊಸ ಅಧ್ಯಾಯವನ್ನು ಬರೆಯಲಿದೆ. ವೈದ್ಯಕೀಯ ಉತ್ಕೃಷ್ಟತೆಗೆ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಸಮರ್ಪಣೆ ನಿಸ್ಸಂದೇಹವಾಗಿ ಆರೋಗ್ಯ ಸೇವೆಗಳಲ್ಲಿ ಆಸ್ಪತ್ರೆಯ ಖ್ಯಾತಿಯನ್ನು ಹೆಚ್ಚಿಸಲಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು