ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಡಾ.ನಿಕಿನ್ ಶೆಟ್ಟಿ ನೇಮಕ

ಉಡುಪಿ : ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ 54 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ವೈದ್ಯಾಧಿಕಾರಿಯೊಬ್ಬರು ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ.

ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ನಿಕಿನ್ ಶೆಟ್ಟಿ ಅವರು ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ 2027-29ನೇ ಸಾಲಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಂದಾವರದವರಾದ ಡಾ.ನಿಕಿನ್ ಶೆಟ್ಟಿ ಅವರನ್ನು ಉಡುಪಿ ಜಿಲ್ಲಾ ಸಂಘ ಹಾಗೂ ಕರ್ನಾಟಕ ಸರಕಾರಿ ನೌಕರರ ಸಂಘದ ಕುಂದಾಪುರ ಅಧ್ಯಕ್ಷ ಡಾ.ನಾಗೇಶ್ ಅಭಿನಂದಿಸಿದ್ದಾರೆ.

ಇದೇ ವೇಳೆ ವಿಜಯಪುರದಲ್ಲಿ ನಡೆದ ಸರಕಾರಿ ವೈದ್ಯಾಧಿಕಾರಿಗಳ ರಾಜ್ಯಮಟ್ಟದ 31ನೇ ಸಮ್ಮೇಳನದಲ್ಲಿ ಉಡುಪಿ ಜಿಲ್ಲೆ ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿರುವ ಡಾ.ನರಸಿಂಹ ನಾಯಕ್‌ ಅವರಿಗೆ ವೈದ್ಯಶ್ರೀ ಪ್ರಶಸ್ತಿಯೊಂದಿಗೆ ಗೌರವಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Related posts

ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ

ಪರಾರಿಯಾಗಲು ಯತ್ನಿಸಿದ ಆರೋಪಿಯ ರಾದ್ಧಾಂತ : ಸರಣಿ ಅಪಘಾತ, ಪೊಲೀಸರಿಂದ ಸಿನಮೀಯ ಶೈಲಿಯಲ್ಲಿ ಬಂಧನ

ಬಜೆಟ್ ಅಧಿವೇಶನ ಮುಗಿದ ಕೂಡಲೇ ಹಕ್ಕುಪತ್ರ ವಿತರಣೆಗೆ ಗಂಟಿಹೊಳೆ ಸೂಚನೆ