ಅಭಿಜಾತ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ನಿಧನಕ್ಕೆ ಡಾ.ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಅಭಿಜಾತ ಕಲಾವಿದರಾಗಿದ್ದ ಕುಂಬಳೆ ಶ್ರೀಧರ ರಾವ್ ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಯಕ್ಷಗಾನ ತಿರುಗಾಟ ಮೇಳದಲ್ಲಿ ಆರು ದಶಕಗಳಿಗೂ ಮಿಕ್ಕಿ ಕಲಾಸೇವೆಗೈದ ಕುಂಬಳೆ ಶ್ರೀಧರ ರಾಯರ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬ ಬಳಗದವರಿಗೆ ನೀಡಲೆಂದು ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ