ಡಾ. ವಿಕ್ರಮ್ ಜೈನ್‌ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ

ಉಡುಪಿ : ಪ್ರಸಾದ್‌ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇದರ ನಿರ್ದೇಶಕ ಹಾಗೂ ನೇತ್ರತಜ್ಞ ಡಾ. ವಿಕ್ರಮ್ ಜೈನ್ 2025ನೇ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 20 ವರ್ಷಗಳಿಂದ ಅವರು ನೇತ್ರ ಆರೋಗ್ಯ ರಕ್ಷಣಾ ಸೇವೆಯಲ್ಲಿ ನಿರತರಾಗಿದ್ದಾರೆ. ಮೇ 22ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಡಾ.ಅಶೋಕ್‌ ಬಿ.ಹಿಂಚಗೇರಿ, ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಬಸವರಾಜ್ ಹೊರಟ್ಟಿ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್ ಜೋಶಿ, ಆರ್ಯಭಟ ಸಾಂಸ್ಕತಿಕ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಎಚ್.ಎಲ್. ಎನ್‌ ರಾವ್ ಮೊದಲಾದ ವಿವಿಧ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ