ನೆಕ್ಕಿಲಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್ : ಚಾಲಕ ಅಪಾಯದಿಂದ ಪಾರು…!

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ.

ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ.

ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆ್ಯಂಬುಲೆನ್ಸ್ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ