ತೆಂಕನಿಡಿಯೂರು ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಸಮಾಜಕಾರ್ಯ ವೇದಿಕೆ ಮತ್ತು ಎನ್.ಎಸ್.ಎಸ್. ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರಕಾರ ಮತ್ತು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ದೊಡ್ಡಣಗುಡ್ಡೆ ಮನೋ ವೈದ್ಯ ಡಾ. ವಿರೂಪಾಕ್ಷ ದೇವರಮನೆ, ನಶಾ ಮುಕ್ತ ಭಾರತ ಅಭಿಯಾನ ಮತ್ತು ಪ್ರಸ್ತುತ ಉಡುಪಿ ಜಿಲ್ಲೆಯನ್ನು ನಶಾ ಮುಕ್ತ ಮಾಡುವ ಬಗ್ಗೆ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಯಗೋಲ, ಅಕ್ಷರ ಯಾಧವ್, ರಾಜ್ಯ ಸಂಯೋಜನಾಧಿಕಾರಿಗಳು ನಶಾ ಮುಕ್ತ ಭಾರತ ಅಭಿಯಾನ, ಶಿವಾಜಿ ಎ.ಕೆ. ಪ್ರೋಜೆಕ್ಟ್ ಸಂಯೋಜನಾಧಿಕಾರಿಗಳು ಮತ್ತು ಮಮತಾ, ಸಮಾಜಕಾರ್ಯ ವಿಭಾಗ ಮುಖ್ಯಸ್ಥರು (ಪದವಿ) ಮತ್ತು ಸುಷ್ಮಾ ಟಿ., ಸಮಾಜಕಾರ್ಯ ವಿಭಾಗ ಮುಖ್ಯಸ್ಥರು (ಸ್ನಾತಕೋತ್ತರ) ಉಪಸ್ಥಿತರಿದ್ದರು.

ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟಾ ಮಥಾಯಿಸ್ ಸ್ವಾಗತಿಸಿ, ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ರಿಯೋನಾ ಕಾರ್ಯಕ್ರಮ ನಿರೂಪಿಸಿ ದ್ವಿತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿ ಓಶಿಯನ್ ಬಾರಾ ವಂದಿಸಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್