ಎಂಡಿಎಂಎ ಮಾದಕದ್ರವ್ಯ ಪೂರೈಸುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಪೂರೈಸುತ್ತಿದ್ದ ಡ್ರಗ್ ಪೆಡ್ಲರ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ನಿವಾಸಿ ಮೊಹಮ್ಮದ್ ಅಲ್ಫಾಝ್(24) ಬಂಧಿತ ಆರೋಪಿ.

ಈತ ನವೆಂಬರ್‌ 25ರಂದು ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಗೌತಮ್ (22), ಕಾರ್ತಿಕ್ (27), ನಿಖಿಲ್(28) ಎಂಬವರಿಗೆ ಎಂಡಿಎಂಎ ಪೂರೈಕೆ ಮಾಡಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಈತನನ್ನು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯ ಮುಡಿಪು ಬಳಿ ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ 53 ಗ್ರಾಂ ಎಂಡಿಎಂಎ ಮಾದಕದ್ರವ್ಯ, ಸ್ಮೋಕ್ ಪಾಟ್, ಒಂದು ಕಾರು, 2 ಮೊಬೈಲ್, ಹೀಗೆ ಒಟ್ಟು 7,76,980/- ಮೌಲ್ಯದ ಸೋತ್ತನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಒಟ್ಟು ಈ ಪ್ರಕರಣದಲ್ಲಿ 103 ಗ್ರಾಂ ಎಂಡಿಎಂಎ ಹಾಗೂ ಒಟ್ಟು 15,52,980/- ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ