ನಿರಂತರ ಮಳೆ ಹಿನ್ನೆಲೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು : ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ‌ಸುರಿದ ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ‌ ಪ್ರವಾಸಿಗರಿಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನ ಹಳ್ಳ ಪ್ರವೇಶಕ್ಕೆ ನಿಷೇಧ ಹೇರಿದೆ.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜುಲೈ 31ರ ವರೆಗೂ ಮುಳ್ಳಯ್ಯನಗಿರಿ ಭೇಟಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೊಂಚ ಮಳೆ ವಿರಾಮ ನೀಡಿದ್ದು ಒಂದು ವಾರಗಳ‌ ಕಾಲ ಸುರಿದ ಮಳೆ‌ ವಾಡಿಕೆ‌ ಪ್ರಮಾಣದ 25% ಅಷ್ಟು ಹೆಚ್ಚಿದ್ದು ಗಾಳಿ ಸಹಿತ ಸುರಿದ ಮಳೆ ಒಂದೇ ವಾರಕ್ಕೆ ನೂರು ಕೋಟಿ ನಷ್ಟ ಮಾಡಿದೆ. ರಾಜ್ಯದ ಅತ್ಯಂತ ಎತ್ತರದ ಶಿಖರ ಮುಳ್ಳಯ್ಯನಗಿರಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿದ್ದು ಪ್ರತಿ ದಿನ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ರಾಜ್ಯ, ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಆದರೆ ಇದೀಗ, ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದು, ಬೃಹತ್ ಗಾತ್ರದ ಕಲ್ಲು, ಮಣ್ಣು, ಮರ ರಸ್ತೆಗೆ ಬಿಳುತ್ತಿವೆ. ಹೀಗಾಗಿ ಕೈಮರ ಚೆಕ್ಪೋಸ್ಟ್ ಬಳಿ ಗೇಟ್ ಬಂದ್ ಮಾಡಲಾಗಿದೆ.

Related posts

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ

ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ