ಲೋಕಸಭಾ ಚುನಾವಣೆ ಸೋಲಿನ ಹತಾಶೆಯಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬರೆ ಎಳೆದ ಸರಕಾರ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ಲೋಕಸಭಾ ಚುನಾವಣೆಯ ಸೋಲಿನ ಹತಾಶೆಗೂಂಡ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಮೇಲೆ ತೆರಿಗೆ ಭಾರ ಹೊರಿಸಿ ಭಾಗ್ಯ ಗ್ಯಾರಂಟಿಗಳ ನೆಪದಲ್ಲಿ ಖಜಾನೆ ತುಂಬಿಸಲು ಜನತೆಗೆ ಬರೆ ಎಳೆದಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ