ಮನೆ ನಿರ್ಮಾಣ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೇಸ್ತ್ರಿಮೃತ್ಯು..!

ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ (45) ಎಂದು ಗುರುತಿಸಲಾಗಿದೆ. ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಪ್ರಕಾಶ್ ಅವರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಯಲ್ಲಿ ಮೂವರು ಒಟ್ಟು ಸೇರಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್‌ಗಳು ಮುರಿದು ಬೀಳುವುದನ್ನು ಗಮನಿಸಿ ತಕ್ಷಣ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಕೆಲಸಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ