ಫೋಟೋ ಎಡಿಟ್ ಮಾಡಿ ಅವಹೇಳನ : ಕಾಂಗ್ರೆಸ್ ಮುಖಂಡನಿಂದ ಸೈಬರ್ ಕ್ರೈಮ್‌ಗೆ ದೂರು

ಉಡುಪಿ : ನನ್ನ ಫೋಟೊವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ನಡೆಸುತ್ತಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಾನು ಸೈಬ‌ರ್ ಕ್ರೈಮ್‌ಗೆ ದೂರು ಸಲ್ಲಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಸಾದ್‌ರಾಜ್ ಕಾಂಚನ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ‌ದಿಂದ ಸ್ಪರ್ಧಿಸಿದ್ದ ತಾನು ಆ ಸಮಯದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಉಡುಪಿಯ ಮಸೀದಿಗೆ ಭೇಟಿ ನೀಡಿದ ಫೋಟೊ‌ವನ್ನು ಕೆಲವು ದುಷ್ಕರ್ಮಿಗಳು ಎಡಿಟ್ ಮಾಡಿ ಮುಸ್ಲಿಂ ಸಮಾಜದ ಟೋಪಿಯನ್ನು ನನಗೆ ತಲೆಗೆ ಇರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚುರ ಪಡಿಸಿದ್ದರು ಎಂದು ಆರೋಪಿಸಿದ್ದಾರೆ.

ವಿ.ಸೂ. :ಆರೋಪದ ಬಗೆಗಿನ ಮಾಹಿತಿಗಾಗಿ ಬಳಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ನಾನು ಹಿಂದು ವಿರೋಧಿ ಎಂಬಂತೆ ಪ್ರಚಾರ ಮಾಡಿ ನನ್ನ ಸೋಲಿಗೆ ಕಾರಣರಾಗಿದ್ದಾರೆ. ಅದೇ ಎಡಿಟ್ ಮಾಡಿದ ಫೋಟೊವನ್ನು ಈಗ ಕಿಡಿಗೇಡಿಗಳು ಇಂದು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಹಾಕಿ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವದ ಸಂದರ್ಭದಲ್ಲಿ ಬಳಸಿ, ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರಿಗೆ ದೇವಸ್ಥಾನದಲ್ಲಿ ಸನ್ಮಾನ ಮಾಡಲು ನಾನು ಕಾರಣಕರ್ತನೆಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !