ಮಕ್ಕಳ ರಕ್ಷಣೆಗಿರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ : ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿದ ಕಾಯ್ದೆ, ಯೋಜನೆ, ನಿಯಮಾವಳಿಗಳು ಕೇವಲ ಸುತ್ತೋಲೆಗಷ್ಟೆ ಸೀಮಿತವಾಗಿರದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ, ಜಿಲ್ಲಾಡಳಿತ, ಜಿ.ಪಂ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಹಯೋಗದಲ್ಲಿ ತಾ.ಪಂ. ಸಭಾಂಗಣದಲ್ಲಿ ಜರಗಿದ ಪೋಕ್ಸೋ, ಬಾಲ್ಯವಿವಾಹ, ಆರ್‌ಟಿಇ, ಭ್ರೂಣಹತ್ಯೆ, ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆ ಕಾಯ್ದೆಗೆ ಪ್ರತಿವರ್ಷ ತಿದ್ದುಪಡಿ ಮಾಡಲಾಗುತ್ತದೆ. ಜಿಲ್ಲೆ, ತಾಲೂಕು ಮಟ್ಟದ ಸಹಭಾಗೀದಾರರು ಇದರ ಬಗ್ಗೆ ಅರಿವು ಹೊಂದಿರುವುದರ ಜತೆಗೆ ಇಲಾಖೆಗಳ ಜತೆ ಸಮನ್ವಯತೆ ಸಾಧಿಸಬೇಕು ಎಂದರು.

ಶಾಲೆಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲದೆ, ಅವು ಮಕ್ಕಳಿಗೆ ರಕ್ಷಣೆಕೊಡುವ ಸಂಸ್ಥೆಗಳಾಗಿ ರೂಪುಗೊಳ್ಳಬೇಕು. ಮಕ್ಕಳ
ರಕ್ಷಣ ಅನುಷ್ಠಾನ ನೀತಿ, ಮಕ್ಕಳ ಸಹಾಯವಾಣಿ ತೆರೆಯಬೇಕು. ಏಕಪೋಷಕ, ಅನಾಥ ಮಕ್ಕಳು, ತಂದೆ-ತಾಯಿ ನಿರ್ಲಕ್ಷಿತ ಮಕ್ಕಳು, ಅಂಗವಿಕಲ ಮಕ್ಕಳು, ಆರ್ಥಿಕವಾಗಿ ಹಿಂದುಳಿದ ಮಕ್ಕಳೂ ಮತ್ತಿತರ ಸಂಕಷ್ಟಕ್ಕೊಳಗಾದ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ