ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿದ ಹುಚ್ಚುನಾಯಿ!

ಉಡುಪಿ : ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದ ಮಾರುತಿ ವೀಥಿಕಾದಲ್ಲಿ ಸಂಭವಿಸಿದೆ.
ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರೂ ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿ‌ರುವುದನ್ನು ಸ್ಥಳೀಯರು ಗಮನಿಸಿದರು. ಹಲವು ಮಂದಿಗೆ ಕಚ್ಚಿ ತೀರಾ ಸುಸ್ತಾದ ಈ ನಾಯಿಯು ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ನೋಡಿದ್ದಾರೆ. ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿದಯಾ ಸಂಘದವರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಪರಿಶೀಲನೆ ನಡೆಸಿದರು. ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ