ಮದರಸದ ಎಂಟನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌‌ನಲ್ಲಿ ಆತ್ಮಹತ್ಯೆ

ಬ್ರಹ್ಮಾವರ : ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೆಲ್‌‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯು ರಿಹಾನ ಬೇಗಂ ಎಂಬವರ ಪುತ್ರ ಮೊಹಮ್ಮದ್‌ ಜಹೀದ್ (12) ಎಂದು ಗುರುತಿಸಲಾಗಿದೆ.

ಈತನು ಕಳೆದ 4 ತಿಂಗಳಿಂದ ಬ್ರಹಾವರ ತಾಲೂಕಿನ ರಂಗನಕೆರೆಯ ಮಾಲೀಕ್ ದಿನಾರ್ ಮದರಸ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಹೇರಾಡಿ ಖಾಸಗಿ ಶಾಲೆಯಲ್ಲಿ 08‌ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯನ್ನು ಮುಗಿಸಿ ಅ. 11ರಂದು ಹಾಸ್ಟೆಲ್‌‌ಗೆ ಮರಳಿದ್ದಾನೆ.

ಆತ ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದುದನ್ನು ಗಮನಿಸಿ ಹುಡುಕಿದಾಗ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದುದು ಕಂಡುಬಂದಿದೆ. ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10:40ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ನಿಧನ

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ