ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ಏಕತಾ ಓಟ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ ಒಂದಾಗಿ ದೇಶದ ಐಕ್ಯತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ದೃಢ ಸಂಕಲ್ಪ ತೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜ್ ಬಳಿಯಿಂದ ಕಡಿಯಾಳಿಯ ವರೆಗೆ ಹಮ್ಮಿಕೊಂಡ ಏಕತಾ ಓಟದಲ್ಲಿ ಭಾಗವಹಿಸಿ ಮಾತನಾಡಿದರು.

ಏಕತಾ ಓಟದ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ ಭಾರತದ ಏಕೀಕರಣಕ್ಕೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಭಾರತೀಯರು ಮರೆಯಲು ಅಸಾಧ್ಯ. ಅವರ ಜೀವನಾದರ್ಶವನ್ನು ನೆನಪಿಸಿಕೊಳ್ಳುವ ಜೊತೆಗೆ 150ನೇ ಜಯಂತ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡ ಏಕತಾ ಓಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಸಂಸದರು, ಶಾಸಕರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣoಕಿಲ ಶ್ರೀಶ ನಾಯಕ್ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !