ಸೊಳ್ಳೆ ಉತ್ಪತ್ತಿಗೆ ಕಾರಣರಾಗುವವರ ವಿರುದ್ಧ ಕ್ರಮಕ್ಕೆ ಸಿವಿಲ್ ಬೈಲಾ ಜಾರಿ : ಡಾ.ಪ್ರಶಾಂತ್ ಭಟ್

ಉಡುಪಿ : ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್‌ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ. ಇದನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸರಕಾರದ ಮಟ್ಟ‌ದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ 25ರವರೆಗೆ ಒಟ್ಟು 164 ಡೆಂಗು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಉಡುಪಿ- 102, ಕುಂದಾಪುರ- 35, ಕಾರ್ಕಳ- 25 ಪ್ರಕರಣಗಳು ಕಂಡುಬಂದಿವೆ. ಅದೇ ರೀತಿ ಒಟ್ಟು 30 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ.

ಇದರಲ್ಲಿ 29 ವಲಸೆ ಕಾರ್ಮಿಕರು ಹಾಗೂ ಒಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ