ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ : ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ.ಟಿ.ಯ ಎನ್.ಎಸ್.ಎಸ್. ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್, ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು, ನಾಗಬನಗಳ ಮೂಲಕ ಪರಿಸರ ಉಳಿಸುವ ಕಾರ್ಯ ನಿರಂತರ ಮಾಡಿದ್ದರು. ಆದರೆ ಇಂದು ವಿವಿಧ ಕಾರಣಗಳನ್ನು ನೀಡಿ ಪರಿಸರ ನಾಶ ಮಾಡಲಾಗುತ್ತಿರುವುದು ದುರದೃಷ್ಟ. ನಾವೆಲ್ಲರೂ ಹೆಚ್ಚಿನ ಸಂಖ್ಯೆಗಳಲ್ಲಿ ಗಿಡ ನೆಟ್ಟು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ ಅವರು ಮಾತನಾಡಿ ನಮ್ಮ ಇಲಾಖೆಯ ಆವರಣದಲ್ಲಿ ಗಿಡ ನೆಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಇದನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಗಿಡಗಳನ್ನು ಈ ಪರಿಸರದಲ್ಲಿ ನೆಡುತ್ತೇವೆ ಎಂದರು.

ಎಂ.ಐ.ಟಿ ಮಣಿಪಾಲದ ನಿರ್ದೇಶಕ ಕಾಂ. ಅನಿಲ್ ರಾಣಾ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಎಂ.ಐ.ಟಿ ಮಣಿಪಾಲದ ಜಂಟಿ ನಿರ್ದೇಶಕರು ಡಾ| ಸೋಮಶೇಖರ್ ಭಟ್, ಭದ್ರತಾ ಅಧಿಕಾರಿ ರತ್ನಾಕರ ಸಾಮಂತ್, ಪ್ರಬಂಧಕ ರಾಮದಾಸ್’ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ಬಾಲಕೃಷ್ಣ ಮದ್ದೋಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಗೌರವಾಧ್ಯಕ್ಲ ವಿಶ್ವನಾಥ್ ಶೆಣಿೈ, ಅಧ್ಯಕ್ಷರಾದ ಪ್ರೊ.ಶಂಕರ್, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಲಾವಿದೆ ಪದ್ಮಾಸಿನಿ ಉದ್ಯಾವರ ಮುಂತಾದವರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ