ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ‌ವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಂಬಂಧಿತ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ(ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆದಾರರು ವಿವಿಧ ರೀತಿಯ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗಲಿದೆ. ಜೊತೆಗೆ ಸರಕಾರದ ವಿವಿಧ ಇಲಾಖೆ ಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೂ ವಿವಿಧ ಸೇವೆಗಳನ್ನು ಒದಗಿಸಲು ಅನುಕೂಲವಾಗಲಿದೆ ಎಂದರು.

ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭ್ಯಗಳನ್ನು ನೌಕರರಿಗೆ ಒದಗಿಸುವ ಮೂಲಕ ಯಾವುದೇ ಸಮಸ್ಯೆಗಳಿಲ್ಲದೆ ಯಶಸ್ವಿಯಾಗಿ ಕಾರ್ಯ ನಿರ್ವಸಬಹುದಾಗಿದೆ ಎಂದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ