ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.

ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ವಂಚಿಸುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಖುದ್ದು ನಾನೇ ದೂರು ನೀಡಿದ್ದೇನೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ