ಸ್ಥಳೀಯರಿಗೆ ಈ ಹಿಂದಿನಂತೆ ಟೋಲ್ ವಿನಾಯಿತಿ ನೀಡಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರಿನ ಟೋಲ್‌ಗಳ ಸಮೀಪ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಐದಾರು ಬಾರಿಗೂ ಹೆಚ್ಚು ಟೋಲ್‌ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ, ಸ್ಥಳೀಯ ವ್ಯಾಪ್ತಿಯಲ್ಲಿ ವಾಸಿಸುವ ಸಾರ್ವಜನಿಕರಿಗೆ ಈ ಹಿಂದೆ ನೀಡುತ್ತಿದ್ದ ರೀತಿಯಲ್ಲಿಯೇ ಅವರುಗಳ ವಾಹನಗಳಿಗೆ ವಿನಾಯಿತಿ ಕಲ್ಪಿಸಬೇಕು ಎಂದು ತಿಳಿಸಿದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ