ಮುಸುಕುಧಾರಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ : ಆರೋಪಿಗಳ ಪತ್ತೆಗೆ 3 ವಿಶೇಷ ತಂಡ ರಚನೆ

ಕಾಪು : ಕಾಪು ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂ ಒಡೆದು ಹಣ ಲೂಟಿಗೆ ವಿಫಲ ಯತ್ನ ನಡೆದಿದ್ದು ಆರೋಪಿಗಳ ಮತ್ತೆಗೆ 3 ವಿಶೇಷ ತಂಡ ರಚಿಸಲಾಗಿದೆ.

ಉಡುಪಿ ಎಸ್ಪಿ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ ಮೂರು ತಂಡ ರಚನೆಗೊಂಡಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮುಂಜಾನೆ ಎರಡು ಗಂಟೆ ಸುಮಾರಿಗೆ ಮೂವರು ಮುಸುಕುಧಾರಿಗಳು ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ. ಈ ವೇಳೆ ಮಷೀನ್ ಒಳಗಿನಿಂದ ಸೈರನ್ ಮೊಳಗಿದ್ದರಿಂದ ದರೋಡೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದರು. ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ.

Related posts

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಶಿಕ್ಷಣತಜ್ಞ ಸೀತಾರಾಮ ಶೆಟ್ಟಿ ನಿಧನ