ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್‌ಬುಕ್ ಅಕೌಂಟ್ – ದೂರು ದಾಖಲು

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ, ಫೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಫೇಸ್‌ಬುಕ್ ಖಾತೆ ಸೃಜಿಸಿ Friend request ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಠಾಣಾಧಿಕಾರಿ ಸೆನ್‌ ಪೊಲೀಸ್‌ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಕೋರಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ